ಕಾರ್ತಿಕ ಮಾಸ ಕೃಷ್ಣ ಚತುರ್ದಶಿಯಂದು ದೇವಸ್ಥಾನದಲ್ಲಿ ದೀಪೋತ್ಸವ. ದೇವಸ್ಥಾನದ ಆದಿ ದೇವಸ್ಥಾನ ವೆಂಕಟರಮಣ ದೇವಸ್ಥಾನದಿಂದ ಈ ದೇವಸ್ಥಾನದವರೆಗೆ ದೀಪಾಲಂಕೃತಗೊಳಿಸಲಾಗುತ್ತದೆ. ದೇವಸ್ಥಾನದ ಎದುರು ಶೇಡಿಮರ.ಈ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಯಾವುದೇ ರಕ್ತಾಹರ ಇರುವುದಿಲ್ಲ.ಮೇಷ ಮಾಸ, ಸಿಂಹ ಮಾಸ, ವೃಶ್ಚಿಕ ಮಾಸಗಳಲ್ಲಿ ಚರುವಿನ ಪೂಜೆ , ಸೋಣೆ ತಿಂಗಳು ಸಿಂಹ ಮಾಸದಲ್ಲಿ ಸೋಣೆ ಆರತಿ ನೆಡೆಯುತ್ತದೆ.ಕುಂಭ ಸಂಕ್ರಮಣದಂದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ತಮ್ಮ ವಾಕ್ ತೀಮರ್ಾನಗಳನ್ನು ದೇವರದರ್ಶನದಲ್ಲಿ ಮಾಡಿಕೊಂಡು ಹೋಗುವುದು ವಿಶೇಷ. ವಶ್ಚಿಕ ಸಂಕ್ರಮಣದ ಮರುದಿನ ದೇವರ ತಾರಂಕುಲಕ್ಕೆ ಅನುಸಾರವಾಗಿ ದೇವಸ್ಥಾನದ ವತಿಯಿಂದ ದಶಾವತಾರ ಯಕ್ಷಗಾನ ಮೇಳ ಪ್ರಾರಂಭವಾಗಿ ಈ ಕ್ಷೇತ್ರದಲ್ಲಿ ಪ್ರಥಮ ಸೇವೆ ನೆಡೆಯುತ್ತದೆ. ಅದರ ಮರುದಿನ ಆಡಳಿತದಾರನ(ಗುಡಿಕೇರಿ) ಮನೆಯಲ್ಲಿ ಸೇವೆ ಆಟ ನೆಡೆಯುವುದು ಸ್ಥಳ ಪದ್ಧತಿ. ವೆಂಕಟರಮಣ ದೇವಸ್ಥಾನದಲ್ಲಿ ಸಿಂಹ ಮಾಸ, ಶುಕ್ಲ ಪಕ್ಷದ ಶ್ರಾವಣ ನಕ್ಷತ್ರದಂದು ಸೌರ ಋಗ್ ಉಪಕರ್ಮ ಆಚರಣೆ ಮಾಡಿ ನಂತರ ಅಲ್ಲಿ ಪೂಜಿಸಲ್ಪಟ್ಟ ಉಪವೀತವನ್ನು ಬ್ರಹ್ಮಲಿಂಗೇಶ್ವರ ದೇವರಿಗೆ ಹಾಕುವುದು ವಾಡಿಕೆ.